Uncategorized

ಬಾಂಗ್ಲಾದೇಶದ ಅಕ್ರಮ ವಲಸಿಗರಿಗೆ ಆಧಾರ್‌ ಮತ್ತು ಪ್ಯಾನ್‌ ಕಾರ್ಡ್ ‌ಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿಯೊಬ್ಬರ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್​ ನಿರಾಕರಿಸಿದೆ.

ಬಾಂಗ್ಲಾದೇಶದ ಅಕ್ರಮ ವಲಸಿಗರಿಗೆ ಆಧಾರ್‌ ಮತ್ತು ಪ್ಯಾನ್‌ ಕಾರ್ಡ್ ‌ಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿಯೊಬ್ಬರ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್​ ನಿರಾಕರಿಸಿದೆ.

ಬೆಂಗಳೂರು: ಬಾಂಗ್ಲಾದೇಶದ ಅಕ್ರಮ ವಲಸಿಗರಿಗೆ ಆಧಾರ್‌ ಮತ್ತು ಪ್ಯಾನ್‌ ಕಾರ್ಡ್​‌ಗಳನ್ನು ಸೃಷ್ಟಿಸಿದ ಆರೋಪ ಎದುರಿಸುತ್ತಿದ್ದ ವ್ಯಕ್ತಿಯೊಬ್ಬರ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿರುವ ಹೈಕೋರ್ಟ್​, ಜಾಮೀನು ಕೋರಿ ವಿಚಾರಣಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿದೆ.

ಬಂಧಿತ ಫೋಟೋಕಾಪಿ ಅಂಗಡಿ ಮಾಲೀಕ ಅರ್ನಾಬ್​ ಮಂಡಲ್​ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಅರ್ಜಿದಾರರಿಗೆ ಅರ್ಜಿಯನ್ನು ಹಿಂಪಡೆಯಲು ಅವಕಾಶ ನೀಡಿದ್ದು, ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯವನ್ನು ಸಂಪರ್ಕಿಸಲು ಅವಕಾಶ ಕಲ್ಪಿಸಿದೆ.

ಅರ್ಜಿ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಅರ್ಜಿದಾರರನ್ನು ಬಂಧಿಸಲು ಕಾರಣ ನೀಡಿಲ್ಲ. ಅರ್ಜಿದಾರರು ಯಾವುದೇ ಅಪರಾಧ ಎಸಗಿಲ್ಲ ಎಂದರು. ಇದಕ್ಕೆ ತೀವ್ರ ಅಸಮಾಧಾನಗೊಂಡ ನ್ಯಾಯಪೀಠ, ಅರ್ಜಿದಾರ ವಕೀಲರನ್ನು ಉದ್ದೇಶಿಸಿ, ಪ್ರಕರಣದಲ್ಲಿ ಗಂಭೀರ ಸ್ವರೂಪದ ಅಪರಾಧಗಳಿವೆ. ಅರ್ಜಿದಾರರು ಬೇರೆ ದೇಶಗಳಿಂದ ಭಾರತಕ್ಕೆ ಬಂದವರಿಗೆ ನಕಲಿ ಆಧಾರ್ ಕಾರ್ಡ್ ನೀಡುವ ಮೂಲಕ ದೇಶದ ಎಲ್ಲಾ ವ್ಯವಸ್ಥೆಯನ್ನು ನಾಶ ಮಾಡುತ್ತಿದ್ದಾರೆ. ಅರ್ಜಿದಾರ ದೇಶದ ಹಿತಾಸಕ್ತಿಯ ವಿರುದ್ಧ ಕೆಲಸ ಮಾಡಿದ್ದಾರೆ. ಇಂತಹವರ ವಿರುದ್ಧ ಪ್ರಕರಣ ರದ್ದುಪಡಿಸಬೇಕು ಎಂದು ಬಯಸುತ್ತಿರಾ? ಅದೂ ಬಂಧನಕ್ಕೆ ಕಾರಣ ನೀಡಿಲ್ಲವೆಂದು ಹೀಗೆ ಮಾಡಿದ್ದಿರಾ ಎಂದು ಪೀಠ ತೀಕ್ಷ್ಣವಾಗಿ ಪ್ರಶ್ನಿಸಿತು.

ಅಲ್ಲದೇ, ಎಷ್ಟು ಆಧಾರ್ ಕಾರ್ಡ್ ಸೃಷ್ಟಿಸುತ್ತೀರಿ? ಎಷ್ಟು ಜನರಿಗೆ ಭಾರತಕ್ಕೆ ಬರಲು ಅವಕಾಶ ಕೊಡುತೀರಿ? ಪ್ರತಿಯೊಬ್ಬರೂ ಆಧಾರ್ ಕಾರ್ಡ್ ಪಡೆಯುತ್ತಾರೆ. ಏಕೆ? ಅರ್ಜಿದಾರರಂತಹ ಜನರಿಂದ. ದೇಶದ ಹಿತಾಸಕ್ತಿ ಬಗ್ಗೆ ಸ್ವಲ್ಪಮಟ್ಟಿಗಾದರೂ ಕಾಳಜಿ ಹೊಂದಿರಬೇಕು. ಅರ್ಜಿದಾರರು ತಮ್ನ ಮನೆಯ ಬಾಗಿಲಿಗೆ ಬಂದ ವಿದೇಶಿಯರಿಗೆಲ್ಲಾ ನಕಲಿ ಆಧಾರ್ ಕಾರ್ಡ್ ಮಾಡಿಕೊಡುತ್ತಾರೆಯೇ? ವಿದೇಶಿಯರಿಗೆ ಸುಲಭವಾಗಿ ಆಧಾರ್ ಕಾರ್ಡ್‌ ಮಾಡಿಕೊಡುತ್ತಿರುವ ವ್ಯವಸ್ಥೆಯನ್ನು ಗಮನಿಸಿದರೆ ನಾವು ಎಲ್ಲಿಗೆ ಹೋಗುತ್ತಿದ್ದೇವೆ ಎಂಬುದೇ ತಿಳಿಯುತ್ತಿಲ್ಲ‌? ಎಂದು ಹೈಕೋರ್ಟ್‌ ತೀವ್ರ ಆತಂಕ ವ್ಯಕ್ತಪಡಿಸಿದೆ.

ಇದಕ್ಕೆ ವಕೀಲರು, ಅರ್ಜಿದಾರರ 2024ರ ಫೆ.21ರಿಂದ ಜೈಲಿನಲ್ಲಿ ಇದ್ದಾರೆ. ಅರ್ಜಿದಾರರು, ಅವರ ಮೇಲಿನ ಅಪರಾಧಗಳಿಗೆ ಕಾನೂನಿನಲ್ಲಿ ನಿಗದಿಯಾಗಿರುವ ಜೈಲು ಶಿಕ್ಷೆಯ ಅವಧಿ ಪೈಕಿ ಅರ್ಧ ಅವಧಿಯನ್ನು ಈಗಾಗಲೇ ಜೈಲಿನಲ್ಲಿ ಪೂರೈಸಿದ್ದರು‌. ವಿದೇಶಿಯರ ಕಾಯ್ದೆಯ ಅಪರಾಧವನ್ನು ಹಾಕಲಾಗಿದೆ. ಆದರೆ, ಅಪರಾಧಗಳು ಅರ್ಜಿದಾರರಿಗೆ ಅನ್ವಯಿಸುವುದೇ ಇಲ್ಲ‌ ಎಂದು ವಿವರಿಸಿದರು.

Related Articles

Leave a Reply

Your email address will not be published. Required fields are marked *

Back to top button