Uncategorized

ಬೆಳಗಾವಿ ಮಹಾನಗರ ಪಾಲಿಕೆಯ ಕನ್ನಡ ನಾಡು, ನುಡಿ, ಗಡಿ ಹಿತಾಸಕ್ತಿ ವಿರೋಧಿ ನಿಲುವನ್ನು ಗಂಭೀರವಾಗಿ ಪರಿಗಣಿಸಬೇಕು: ಕಿತ್ತೂರು ಕರ್ನಾಟಕ ಸೇನೆ 

ಬೆಳಗಾವಿ: ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕರಿಸಲು ನಿರಾಕರಿಸುತ್ತಿರುವ ಬೆಳಗಾವಿ ಮಹಾನಗರ ಪಾಲಿಕೆಯ ಕನ್ನಡ ನಾಡು, ನುಡಿ, ಗಡಿ ಹಿತಾಸಕ್ತಿ ವಿರೋಧಿ ನಿಲುವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕಿತ್ತೂರು ಕರ್ನಾಟಕ ಸೇನೆ  ಬೆಳಗಾವಿ ನಗರದ ಪ್ರಾದೇಶಿಕ ಆಯುಕ್ತ ಕಚೇರಿ ಮುಂದೆ ಪ್ರತಿಭಟಿಸಿತು.

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ, ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ, ಗಡಿವಿವಾದಕ್ಕೆ ಮಹಾಜನ ಆಯೋಗದ ವರದಿಯೇ ಅಂತಿಮ ಎಂಬ ಗೊತ್ತುವಳಿ ಅಂಗೀಕರಿಸಬೇಕೆಂದು ಆಗ್ರಹಿಸಿ ಬೆಳಗಾವಿಯ 20 ಕ್ಕೂ ಅಧಿಕ ಕನ್ನಡ ಸಂಘಟನೆಗಳು ಕಳೆದ ಮಾರ್ಚ 26 ರಿಂದ ಹೋರಾಟ ನಡೆಸಿವೆ.

2005 ರ ಅಕ್ಟೋಬರ್ 27 ರಂದು ಬೆಳಗಾವಿ ಪಾಲಿಕೆಯಲ್ಲಿ ಮಹಾರಾಷ್ಟ್ರ ಪರವಾಗಿ ಗೊತ್ತುವಳಿ ಸ್ವೀಕರಿಸಲಾಗಿದೆ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಮೂಲಕ ಗಡಿವಿವಾದ ಬಗೆಹರಿಸಬೇಕೆಂದು ಒತ್ತಾಯಿಸುವ ಗೊತ್ತುವಳಿಯನ್ನು ಅಂಗೀಕರಿಸಲಾಗಿದೆ. 

2004 ರಿಂದ ಸುಪ್ರೀಂ ಕೋರ್ಟಿನಲ್ಲಿ ಸ್ವೀಕಾರವಾಗದೆ ಹೊಸ್ತಿಲಲ್ಲಿರುವ ಗಡಿವಿವಾದ ಪ್ರಕರಣದಲ್ಲಿ ಮಹಾರಾಷ್ಟ್ರ ಸರಕಾರವು ಬೆಳಗಾವಿ ಪಾಲಿಕೆಯ ಗೊತ್ತುವಳಿಯನ್ನು ಪೂರಕ ದಾಖಲೆಯನ್ನಾಗಿ ಬಳಸುತ್ತಿದೆ.

ಈ ಹಿನ್ನೆಲೆಯಲ್ಲಿ ಈಗ ಕರ್ನಾಟಕ ಪರವಾದ ಗೊತ್ತುವಳಿ ಸ್ವೀಕರಿಸಬೇಕೆಂದು ಕನ್ನಡ ಸಂಘಟನೆಗಳು ಹೋರಾಟ ನಡೆಸಿವೆ. ಎರಡು ತಿಂಗಳಿಂದ ಹೋರಾಟ ನಡೆಸಿದ್ರು ಸಹ ಪಾಲಿಕೆಯಲ್ಲಿ 35 ಸದಸ್ಯರ ಬಹುಮತ ಹೊಂದಿರುವ ಬಿಜೆಪಿ ನಾಯಕರು ಗೊತ್ತುವಳಿ ಸ್ವೀಕರಿಸಿಲ್ಲ. 

ಇದು ಕನ್ನಡ ನಾಡು, ನುಡಿಗೆ ಬಗೆದ ದ್ರೋಹವಾಗಿದೆ. ಇದನ್ನು ತಾವು ಗಂಭೀರವಾಗಿ ಪರಿಗಣಿಸಬೇಕು. ಪಾಲಿಕೆಯ ಈನಡವಳಿಕೆಯ ಬಗ್ಗೆ ತಾವು ರಾಜ್ಯ ಸರಕಾರದ ಗಮನ ಸೆಳೆಯಬೇಕೆಂದು ಕೋರುತ್ತೇವೆ ಎಂದು ಆಗ್ರಹಿಸಿ ಪ್ರಾದೇಶಿಕ ಆಯುಕ್ತರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.‌

Related Articles

Leave a Reply

Your email address will not be published. Required fields are marked *

Back to top button