Uncategorized

ಪತಿ ವರದಕ್ಷಿಣೆ ಕಿರುಕುಳ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ

ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.

ಬೆಂಗಳೂರಿನ ಕುಂಬಳಗೋಡು ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಜ್ಯೋತಿ ಮೃತ ಮಹಿಳೆ. ಜ್ಯೋತಿ ಪತಿ ಶರತ್ ಕುಮಾರ್ ಚಾಲಕರಾಗಿ ಕೆಲಸ ಮಾಡುತ್ತಿದ್ದ. ಜ್ಯೋತಿಗೆ ಪತಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಇದೇ ವಿಚಾರಕ್ಕೆ ಮನನೊಂದು ಜ್ಯೋತಿ ನಾಲ್ಕು ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು ಎನ್ನಲಾಗಿದೆ.

ಇದೀಗ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related Articles

Leave a Reply

Your email address will not be published. Required fields are marked *

Back to top button