Uncategorized
ಕಾಂಗ್ರೆಸ್ ಮುಖಂಡರಾದ ಶ್ರೀ ಪರುತಗೌಡ ಪಾಟೀಲ ಅವರು ನಿಧನ

ರಾಮದುರ್ಗ ತಾಲೂಕಿನ ಸಿದ್ನಾಳ್ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಾದ ಶ್ರೀ ಪರುತಗೌಡ ಪಾಟೀಲ ಅವರು ನಿಧನರಾದ ಸುದ್ದಿ ತಿಳಿದು ಮನಸ್ಸಿಗೆ ನೋವಾಯಿತು. ಸಾಮಾಜಿಕ ಹಾಗೂ ರಾಜಕೀಯ ರಂಗದಲ್ಲಿ ಅವರು ಸಲ್ಲಿಸಿದ ಸೇವೆ ಅನನ್ಯವಾದುದು.
ಇಂದು ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಭಾವಪೂರ್ಣ ನಮನಗಳನ್ನು ಸಲ್ಲಿಸಲಾಯಿತು. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಸ್ಥರಿಗೆ ಹಿತೈಷಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿ | ಸದ್ಗತಿ



