ಬೆಂಗಳೂರು
ಪ್ರತಿ ಕ್ವಿಂಟಾಲ್ ತೊಗರಿಗೆ 450 ರೂ ಸರ್ಕಾರದ ವತಿಯಿಂದ

ಬೆಂಗಳೂರು: ಪ್ರಸಕ್ತ ಆರ್ಥಿಕ ವರ್ಷದಲ್ಲಿ ಪ್ರತಿ ಕ್ವಿಂಟಲ್ ತೊಗರಿಗೆ ರಾಜ್ಯ ಸರ್ಕಾರ 450 ಪ್ರೋತ್ಸಾಹಧನ ಘೋಷಣೆ ಮಾಡಿದೆ.
ಆ ಮೂಲಕ ತೊಗರಿ ಬೆಳೆಗಾರರಿಗೆ ಸಿಎಂ ಸಿದ್ದರಾಮಯ್ಯ (Siddaramaiah) ಸರ್ಕಾರದಿಂದ ಗುಡ್‌ನ್ಯೂಸ್ ನೀಡಲಾಗಿದೆ. ಪ್ರೋತ್ಸಾಹಧನ ನೀಡುವುದಕ್ಕೆ ಆರ್ಥಿಕ ಇಲಾಖೆಯಿಂದ ಅನುಮೋದನೆ ನೀಡಲಾಗಿದೆ.2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್‌ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಕ್ವಿಂಟಾಲ್‌ಗೆ 450 ರೂ ಪ್ರೋತ್ಸಾಹಧನ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.
ಇದಕ್ಕಾಗಿ ಅವಶ್ಯವಿರುವ ಅನುದಾನವನ್ನು ಆವರ್ತ ನಿಧಿಯಲ್ಲಿ ಲಭ್ಯವಿರುವ ಮೊತ್ತದಿಂದ ಭರಿಸಲು ಆರ್ಥಿಕ ಇಲಾಖೆ ಕೂಡ ಸಹಮತಿಸಿದೆ.