Uncategorized
6 ವರ್ಷದ ಬಳಿಕ ನಡೀತು ಒಂದು ಮಹಾ ಪವಾಡ!

6 ವರ್ಷದ ಬಳಿಕ ನಡೀತು ಒಂದು ಮಹಾ ಪವಾಡ!
ಈ ರೀತಿಯ ಸ್ಟೋರಿಗಳನ್ನ ನಾವು ಸಿನಿಮಾಗಳಲ್ಲಿ ನೋಡಿರ್ತೀವೆ. ದಕ್ಷಿಣ ಕನ್ನಡ ಜಿಲ್ಲೆಯ #ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆದಿರೋ ಈ ಘಟನೆ ಕೂಡ ಯಾವ ಸಿನಿಮಾ ಸ್ಟೋರಿಗೂ ಕಮ್ಮಿ ಇಲ್ಲ. ಬರೋಬ್ಬರಿ 26 ವರ್ಷಗಳ ಹಿಂದೆ 12 ವರ್ಷದ ಬಾಲಕನಾಗಿದ್ದಾಗ ಮಗ ಮನೆ ಬಿಟ್ಟು ನಾಪತ್ತೆಯಾಗಿದ್ದ. ಆತನಿಗಾಗಿ ತಾಯಿ ಮಾಡದ ಪೂಜೆ ಇಲ್ಲ.. ಬೇಡದ ದೇವರಿಲ್ಲ. ಕೊನೆಗೂ ಆಕೆಯ ಪ್ರಾರ್ಥನೆ ಫಲಿಸಿದೆ.
26 ವರ್ಷದ ಹಿಂದೆ ಏನಾಗಿತ್ತು?
#ಧರ್ಮಸ್ಥಳದ ಅಶೋಕನಗರದ ನಿವಾಸಿಯಾಗಿದ್ದ ಸತೀಶ್, 2000ನೇ ಇಸವಿಯಲ್ಲಿ ಧರ್ಮಸ್ಥಳಕ್ಕೆ ಬಂದಿದ್ದ ಸರ್ಕಸ್ ತಂಡದೊಂದಿಗೆ ಆಕರ್ಷಿತನಾಗಿ ಓಡಿಹೋಗಿದ್ದ. ಮಗನಿಗಾಗಿ ಆತನ ಕುಟುಂಬ ಹುಡುಕದ ಜಾಗವೇ ಇರಲಿಲ್ಲ. ಆತನ ತಾಯಿ, ನಾನು ಸಾಯುವ ಮುನ್ನ ನನ್ನ ಹಿರಿಯ ಮಗನನ್ನು ಒಮ್ಮೆಯಾದರೂ ನೋಡಬೇಕು, ಅವನನ್ನು ಹೇಗಾದರೂ ಕರೆತನ್ನಿ ಎಂದು ಇತ್ತೀಚೆಗಷ್ಟೇ ತನ್ನ ಉಳಿದ ಮಕ್ಕಳ ಬಳಿ ಕಣ್ಣೀರಿಟ್ಟಿದ್ದರು. ಹೆತ್ತ ಕರುಳಿನ ಹಂಬಲಕ್ಕೆ ಓಗೊಟ್ಟಂತೆ ಮಗ ಮರಳಿ ಬಂದಿದ್ದಾನೆ.
ಮನೆ ಬಿಟ್ಟು ಹೋದ ಬಳಿಕ ಸರ್ಕಸ್ ತಂಡದ ಜೊತೆ ದೇಶದ ವಿವಿಧೆಡೆ ಸುತ್ತಾಡಿದ ಸತೀಶ್, ಕಳೆದ 26 ವರ್ಷಗಳಿಂದ ಮಹಾರಾಷ್ಟ್ರದಲ್ಲೇ ನೆಲೆ ನಿಂತು ಕೆಲಸ ಮಾಡಿಕೊಂಡಿದ್ದ. ನಿರಂತರ ದುಡಿಮೆಯ ನಡುವೆ ಆತ ತನ್ನ ಸ್ವಂತ ಊರು, ಭಾಷೆ ಹಾಗೂ ಹೆತ್ತವರನ್ನೇ ಸಂಪೂರ್ಣವಾಗಿ ಮರೆತುಹೋಗಿದ್ದ.
ಜೂನ್ 9 ರಂದು ಸತೀಶ್ ಅಲಿಯಾಸ್ ಸಲೀಂ ತನ್ನ ಮಹಾರಾಷ್ಟ್ರದ ಸ್ನೇಹಿತರ ತಂಡದೊಂದಿಗೆ ಪ್ರವಾಸಕ್ಕಾಗಿ ಧರ್ಮಸ್ಥಳ ದೇವಸ್ಥಾನಕ್ಕೆ ಬಂದಿದ್ದ. ಈ ವೇಳೆ ಈ ಹಿಂದೆ ಸರ್ಕಸ್ ನಡೆಯುತ್ತಿದ್ದ ಜಾಗಕ್ಕೆ ಬಂದಾಗ ಆತನಿಗೆ ಹಳೆಯ ನೆನಪುಗಳು ಹಠಾತ್ತಾಗಿ ಮರುಕಳಿಸಿವೆ. ಇದೇ ನನ್ನ ಸ್ವಂತ ಊರು ಎಂಬ ಸತ್ಯ ಮನವರಿಕೆಯಾಗಿದೆ. ತಮ್ಮಂದಿರ ಹೆಸರುಗಳು ಅಲ್ಪ ಸ್ವಲ್ಪ ನೆನಪಿದ್ದ ಕಾರಣ, ಸ್ಥಳೀಯ ಅಂಗಡಿಯವರ ಬಳಿ ವಿಚಾರಿಸಿ ಕೊನೆಗೂ ತನ್ನ ಹಳೆಯ ಮನೆಯನ್ನು ಹುಡುಕಿಕೊಂಡು ಹೋಗಿದ್ದಾನೆ. ಮನೆಯ ಬಾಗಿಲಿಗೆ ಬಂದು ನಿಂತ ಹಿರಿಯ ಮಗನನ್ನು ಕಂಡ ತಾಯಿಯ ಕಣ್ಣಲ್ಲಿ ಆನಂದಬಾಷ್ಪ ಹರಿದಿದೆ. ಮನೆಯವರೆಲ್ಲರೂ ಸೇರಿ ಮಗನನ್ನು ಅತ್ಯಂತ ಸಂತಸದಿಂದ ಬರಮಾಡಿಕೊಂಡಿದ್ದಾರೆ.
ಮಗ ಮನೆಗೆ ಬಂದರು ಇಲ್ಲೊಂದು ಟ್ವಿಸ್ಟ್ ಇದೆ. ಹೋಗುವಾಗ ಸತೀಶ್ ಆಗಿದ್ದವನು, ಮನೆಗೆ ಬಂದಾಗ ಸತೀಶ್ ಆಗಿದ್ದಾನೆ!. ಮಹಾರಾಷ್ಟ್ರದಲ್ಲಿದ್ದಾಗ
ಅಲ್ಲಿಯೇ ಇಸ್ಲಾಂಗೆ ಮತಾಂತರಗೊಂಡು ತನ್ನ ಹೆಸರನ್ನು ಸಲೀಂ ಅಬ್ದುಲ್ ಅನ್ಸಾರಿ ಎಂದು ಬದಲಾಯಿಸಿಕೊಂಡಿದ್ದ. ಅಲ್ಲದೆ, ತಾಲೀಮಾ ಎಂಬಾಕೆಯನ್ನು ವಿವಾಹವಾಗಿರುವ ಈತನಿಗೆ, ಈಗ ಖುಷಿ ಮತ್ತು ಅಝಂ ಎಂಬ ಇಬ್ಬರು ಮಕ್ಕಳಿದ್ದಾರೆ. ಇಷ್ಟು ವರ್ಷಗಳ ಕಾಲ ಹೊರ ರಾಜ್ಯದಲ್ಲೇ ಕಳೆದಿದ್ದರಿಂದ ಸತೀಶ್‌ಗೆ ತನ್ನ ಮಾತೃಭಾಷೆಯಾದ ತುಳು ಹಾಗೂ ಕನ್ನಡ ಸಂಪೂರ್ಣವಾಗಿ ಮರೆತುಹೋಗಿದ್ದು, ಈಗ ಕೇವಲ ಹಿಂದಿ ಭಾಷೆಯಲ್ಲಿ ಮಾತ್ರ ಮಾತನಾಡುತ್ತಿದ್ದಾನೆ. ಭಾಷೆ ಬರದಿದ್ದರೆ ಏನಂತೆ ಅಮ್ಮ ಮಗನ ಸಂಬಂಧಕ್ಕೆ ಈಗ ಭಾವನೆಗಳೇ ಬೆಸುಗೆ ಹಾಕಿದೆ.
ಮಗ ಸಿಗಲಿ ಎಂದು ಧರ್ಮಸ್ಥಳ, ಕಟೀಲು ದುರ್ಗಾಪರಮೇಶ್ವರಿ ಹಾಗೂ ಪಣೋಲಿಬೈಲ್ ದೈವಸ್ಥಾನಕ್ಕೆ ತಾಯಿ ವರ್ಷಗಳಿಂದ ಹೊತ್ತಿದ್ದ ಹರಕೆ ಕೊನೆಗೂ ಫಲಿಸಿದೆ. ಕುಟುಂಬದೊಂದಿಗೆ ಕೆಲವು ದಿನಗಳ ಕಾಲ ಸಂತಸದಿಂದ ಕಾಲ ಕಳೆದ ಸತೀಶ್, ಸದ್ಯ ಮಹಾರಾಷ್ಟ್ರಕ್ಕೆ ಮರಳಿದ್ದಾನೆ.



