
ಧಾರವಾಡ: ಧಾರವಾಡದ ಕೇಂದ್ರ ಕಾರಾಗೃಹದ ಜೈಲರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಹೊಸ ಬಸ್ ನಿಲ್ದಾಣದ ಬಳಿ ಇರುವ ಕಾರಾಗೃಹದ ವಸತಿ ಗೃಹದಲ್ಲಿ ಶುಕ್ರವಾರ ನಡೆದಿದೆ.
ಸಿದ್ಧರಾಮಪ್ಪ ವಡ್ಡರ್ (37) ಆತ್ಮಹತ್ಯೆಗೆ ಶರಣಾದ ಜೈಲರ್. ಕಳೆದ ಎರಡು ತಿಂಗಳ ಹಿಂದೆ ಸಿದ್ದರಾಮಪ್ಪ ಅಮಾನತಾಗಿ ಮೈಸೂರು ಕಾರಾಗೃಹಕ್ಕೆ ವರ್ಗಾವಣೆ ಆಗಿದ್ದರು. ಆದರೆ ಇನ್ನೂ ಹೋಗಿ ವರದಿ ಮಾಡಿಕೊಂಡಿರಲಿಲ್ಲ. ಶುಕ್ರವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ.
ಎರಡು ತಿಂಗಳ ಹಿಂದೆ ಜೈಲಿನಲ್ಲಿ ಕರ್ತವ್ಯ ಲೋಪದ ಹಿನ್ನೆಲೆ ಅವರನ್ನು ಅಮಾನತು ಮಾಡಲಾಗಿತ್ತು. ಪತ್ನಿ ಹಾಗೂ ಇಬ್ಬರು ಮಕ್ಕಳು ಬೇರೆ ಊರಿಗೆ ಹೋದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



