Uncategorized

ಸ್ಮಶಾನ ಭೂಮಿಗಾಗಿ ಅಮ್ಮಿನಭಾವಿ ಗ್ರಾಮಸ್ಥರ ಪ್ರತಿಭಟನೆ

ಸ್ಮಶಾನ ಭೂಮಿಗಾಗಿ ಅಮ್ಮಿನಭಾವಿ ಗ್ರಾಮಸ್ಥರ ಪ್ರತಿಭಟನೆ
ಹುಕ್ಕೇರಿ : ತಾಲೂಕಿನ ಅಮ್ಮಿನಭಾವಿ ಗ್ರಾಮದಲ್ಲಿ ಸ್ಮಶಾನ ಭೂಮಿಗಾಗಿ ಆಗ್ರಹಿಸಿ ಗ್ರಾಮಸ್ಥರು ಹಾಗೂ ನೂರಾರು ಮಹಿಳೆಯರು ಪೊಲೀಸ್ ವಾಹನ ಅಡ್ಡಗಟ್ಟಿ
ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.
ಗ್ರಾಮದಲ್ಲಿ ಜಮೀನು ಹೊಂದಿರುವವರು ತಮ್ಮ ಜಮೀನಲ್ಲೇ ಅಂತ್ಯಸಂಸ್ಕಾರ ನಡೆಸುತ್ತಿದ್ದರೆ, ಜಮೀನು ಇಲ್ಲದ ಸಾಮಾನ್ಯ ಜನರು ಸ್ಮಶಾನ ಭೂಮಿಯ ಕೊರತೆಯಿಂದ ಪರದಾಡುವಂತಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ನಂತರ ಪ್ರತಿಭಟನಾಕಾರರು ಪೊಲೀಸ್ ವಾಹನ ಅಡ್ಡಗಟ್ಟಿ ಸರ್ಕಾರ ಹಾಗೂ ಜಿಲ್ಲಾಡಳಿತದ ಗಮನಕ್ಕೆ ತಂದು ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಬಳಿಕ ತಹಶೀಲ್ದಾರ್ ಜೂನ್ 17ರಂದು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

Related Articles

Leave a Reply

Your email address will not be published. Required fields are marked *

Back to top button