Uncategorized
ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ
ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ

ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ
ಬೆಳಗಾವಿ: ಮಾಜಿ ಮುಖ್ಯ ಮಂತ್ರಿ ಹಾಗೂ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ ಅವರನ್ನು 18 ನೇ ಲೋಕಸಭೆಯ “ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ.
ಕೇಂದ್ರ ಸಂಸದೀಯ ವ್ಯವಹಾರ ಸಚಿವಾಲಯದಿಂದ ನೇಮಕ ಅಧಿಸೂಚನೆ ಹೊರಡಿಸಲಾಗಿದೆ.
ತಮ್ಮ ನೇಮಕಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರಿಗೆ ಜಗದೀಶ್ ಶೆಟ್ಟರ್ ಕೃತಜ್ಞತೆ ಸಲ್ಲಿಸಿದ್ದಾರೆ.