Uncategorized
ಭಾರತ, ಕರ್ನಾಟಕ ಚುನಾವಣಾ ಆಯೋಗ, ಬೆಳಗಾವಿ ಜಿಪಂ, ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸೋಮವಾರ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್ಐಆರ್) ಜಾಗೃತಿ ಕುರಿತು ವಿದ್ಯಾರ್ಥಿಗಳು ರ್ಯಾಲಿ ನಡೆಸಿದರು.

ಭಾರತ, ಕರ್ನಾಟಕ ಚುನಾವಣಾ ಆಯೋಗ, ಬೆಳಗಾವಿ ಜಿಪಂ, ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಸೋಮವಾರ ವಿಶೇಷ ಸಮಗ್ರ ಪರಿಷ್ಕರಣೆ ( ಎಸ್ಐಆರ್) ಜಾಗೃತಿ ಕುರಿತು ವಿದ್ಯಾರ್ಥಿಗಳು ರ್ಯಾಲಿ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿಯಿಂದ ಪ್ರಾರಂಭವಾದ ರ್ಯಾಲಿ ನಗರದ ಪ್ರಮುಖ ರಸ್ತೆಗಳಲ್ಲಿ ನಡೆಯಿತು.
ವಿದ್ಯಾರ್ಥಿಗಳು ಮತದಾರರ ಪಟ್ಟಿಯ ಪರಿಷ್ಕರಣೆ, ಹೊಸ ಮತದಾರರ ನೋಂದಣಿ ಹಾಗೂ ಮತದಾನದ ಮಹತ್ವ ಕುರಿತು ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ವರ್ಗಾವಣೆ ಪ್ರಕ್ರಿಯೆಗಳ ಬಗ್ಗೆ ಜನರಿಗೆ ಮಾಹಿತಿ ನೀಡಲಾಯಿತು.
ಈ ರ್ಯಾಲಿಯಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಜಾಪ್ರಭುತ್ವ ಬಲಪಡಿಸಲು ಪ್ರತಿಯೊಬ್ಬರೂ ಮತದಾರರಾಗಿ ನೋಂದಾಯಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಯಶಸ್ವಿಯಾಗಲು ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು