Uncategorized

ಬಹುಕಾಲದ ನಿರೀಕ್ಷೆಯಾಗಿದ್ದ, ಸುಮಾರು ₹8.60 ಕೋಟಿ ವೆಚ್ಚದ ಅತ್ಯಾಧುನಿಕ ತಾಲ್ಲೂಕು ಆಡಳಿತ ಕೇಂದ್ರ ಕಟ್ಟಡ (ಪ್ರಜಾಸೌಧ) ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಯರಗಟ್ಟಿ ತಾಲೂಕಿನ ಸಾರ್ವಜನಿಕರ ಬಹುಕಾಲದ ನಿರೀಕ್ಷೆಯಾಗಿದ್ದ, ಸುಮಾರು ₹8.60 ಕೋಟಿ ವೆಚ್ಚದ ಅತ್ಯಾಧುನಿಕ ತಾಲ್ಲೂಕು ಆಡಳಿತ ಕೇಂದ್ರ ಕಟ್ಟಡ (ಪ್ರಜಾಸೌಧ) ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ, ನೂತನ ತಾಲೂಕು ಪಂಚಾಯತ್ ಕಾರ್ಯಾಲಯವನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಿದರು.
ಜನಸ್ನೇಹಿ ಆಡಳಿತವನ್ನು ಮತ್ತಷ್ಟು ಬಲಪಡಿಸುವ ಈ ಪ್ರಜಾಸೌಧ, ಯರಗಟ್ಟಿ ತಾಲ್ಲೂಕಿನ ಆಡಳಿತ ವ್ಯವಸ್ಥೆಗೆ ಹೊಸ ಆಯಾಮ ನೀಡುವುದರ ಜೊತೆಗೆ ಸಾರ್ವಜನಿಕರಿಗೆ ಒಂದೇ ಸೂರಿನಡಿ ಉತ್ತಮ ಸೇವೆಗಳನ್ನು ಒದಗಿಸುವ ಮಹತ್ವದ ಕೇಂದ್ರವಾಗಿ ರೂಪುಗೊಳ್ಳಲಿದೆ.
ಈ ಸಂದರ್ಭದಲ್ಲಿ ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ವಿಶ್ವಾಸ ವೈದ್ಯ, ವಿ.ಪ. ಸದಸ್ಯರಾದ ಶ್ರೀ ಚನ್ನರಾಜ ಹಟ್ಟಿಹೊಳಿ, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button