Uncategorized

ಕೃತಕ ಬುದ್ಧಿಮತ್ತೆ ಆಧಾರಿತ “Selfy BookAI” ಮೊಬೈಲ್ ಅಪ್ಲಿಕೇಷನ್ ಉದ್ಘಾಟನಾ ಸಮಾರಂಭ

ಬೆಂಗಳೂರಿನ ಕ್ಯಾಪಿಟಲ್ ಹೊಟೇಲ್ ನಲ್ಲಿ ಇಂದು ವಿಶ್ವ ಸಾಮಾಜಿಕ ಮಾಧ್ಯಮ ದಿನಾಚರಣೆಯ ಅಂಗವಾಗಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಸಾಮಾಜಿಕ ತಂತ್ರಜ್ಞಾನ ಮೊಬೈಲ್ ಅಪ್ಲಿಕೇಷನ್ “Selfy BookAI” ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡಿದೆ.

ಈ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ತಮ್ಮಯ್ಯ, ಆಧ್ಯಾತ್ಮಿಕ ಚಿಂತಕರಾದ ಶ್ರೀ ವಿನಯ ಗುರೂಜಿ ಹಾಗೂ ವಿ.ಪ. ಸದಸ್ಯರಾದ ಶ್ರೀ ಸಲೀಂ ಅಹ್ಮದ್ ಹಾಗೂ ಶ್ರೀ ನಂಜೇಶ ಬೆಣ್ಣೂರು ಅವರು ಸೇರಿ ಗಣ್ಯರು ಉಪಸ್ಥಿತರಿದ್ದರು.

ಸಾಮಾಜಿಕ ಮಾಧ್ಯಮಗಳು ಜನರೊಂದಿಗೆ ನೇರ ಸಂಪರ್ಕ ಸಾಧಿಸುವ ಪ್ರಬಲ ಮಾಧ್ಯಮಗಳಾಗಿವೆ. ಕೃತಕ ಬುದ್ಧಿಮತ್ತೆಯಂತಹ ಆಧುನಿಕ ತಂತ್ರಜ್ಞಾನವನ್ನು ಜನಪರ ಅಭಿವೃದ್ಧಿ, ಪಾರದರ್ಶಕ ಆಡಳಿತ ಹಾಗೂ ಯುವಜನರ ಸಬಲೀಕರಣಕ್ಕೆ ಪರಿಣಾಮಕಾರಿಯಾಗಿ ಬಳಸಿಕೊಳ್ಳುವುದು ಕಾಲದ ಅಗತ್ಯವಾಗಿದೆ. ತಂತ್ರಜ್ಞಾನವು ಸಮಾಜದ ಅಭಿವೃದ್ಧಿಗೆ ಹೊಸ ದಾರಿಗಳನ್ನು ತೆರೆದಿಡಲಿ ಎಂಬ ಆಶಯ.

Related Articles

Leave a Reply

Your email address will not be published. Required fields are marked *

Back to top button