ಒಳ ಮೀಸಲಾತಿ ಜಾರಿಗೆ ಸಂಪುಟ ಅಸ್ತು…

ಒಳ ಮೀಸಲಾತಿ ಜಾರಿಗೆ ಸಂಪುಟ ಅಸ್ತು…
ವಿವಿಧ 30 ವಿಷಯಗಳ ಕುರಿತು ಮಹತ್ವದ ಚರ್ಚೆ
ಒಳ ಮೀಸಲಾತಿ ಜಾರಿಗೆ ಸಂಪುಟ ಅಸ್ತು ವಿವಿಧ 30 ವಿಷಯಗಳ ಕುರಿತು ಮಹತ್ವದ ಚರ್ಚೆ
ನೂತನ ಪ್ರವಾಸೋದ್ಯಮ ನೀತಿ-2024 ಜಾರಿ
ಓದು ಕರ್ನಾಟಕ’ ಚಟುವಟಿಕೆಗೆ ಕ್ಯಾಬಿನೆಟ್ ಅನುಮೋದನೆ
ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗಾಗಿ ರಾಜ್ಯ ಸರ್ಕಾರ ಅಸ್ತು ಎಂದಿದೆ.
ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ಧರಾಮಯ್ಯನವರ ನೇತೃತ್ವದಲ್ಲಿ ಸಚಿವ ಸಂಪುಟದ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ಸುಮಾರು ವಿವಿಧ 30 ವಿಷಯಗಳ ಕುರಿತು ಮಹತ್ವದ ಚರ್ಚೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಸಚಿವ ಎಚ್.ಸಿ. ಮಹಾದೇವಪ್ಪ, ಒಳ ಮೀಸಲಾತಿ ನೀಡಲು ಕಾಂಗ್ರೆಸ ಸರ್ಕಾರ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಈಗ ಸುಪ್ರೀಂ ಕೋರ್ಟ ಕೂಡ ಈ ಜವಾಬ್ದಾರಿಯನ್ನು ಆಯಾ ರಾಜ್ಯಗಳಿಗೆ ನೀಡಿದ್ದು, ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿಗೆ ಒಪ್ಪಿಗೆಯನ್ನು ಸೂಚಿಸಲಾಗಿದೆ. ಕಾಂಗ್ರೆಸ ಸರ್ಕಾರ ಒಳ ಮೀಸಲಾತಿ ನೀಡಲು ಬದ್ಧವಾಗಿದೆ ಎಂದರು.
ಇನ್ನು ಸಚಿವ ಎಚ್.ಕೆ. ಪಾಟೀಲ ಅವರು ನೂತನ ಪ್ರವಾಸೋದ್ಯಮ ನೀತಿ-2024, ಶಿವಮೊಗ್ಗ ತಾಲ್ಲೂಕಿನ ಸೋಗಾನೆ ಗ್ರಾಮದಲ್ಲಿರುವ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣದ ಅಭಿವೃದ್ಧಿಗೆ, ಅನುಮೋದನೆ ನೀಡಲಾಗಿದೆ. ಏರ್ಪೋರ್ಟ್ ಅಭಿವರದ್ಧಿ 27.44 ಕೋಟಿ ರೂ. ಹೆಚ್ಚುವರಿ ಮೊತ್ತಕ್ಕೆ ಒಪ್ಪಿಗೆ ನೀಡಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಕಲಿಕಾ ಸಾಮಗ್ರಿಗಳನ್ನು ವಿನ್ಯಾಸಗೊಳಿಸಿ, ಮುದ್ರಿಸಿ, ವಿತರಿಸಲು ಹಾಗೂ ಶಿಕ್ಷಕರಿಗೆ ಅಗತ್ಯ ತರಬೇತಿ ನೀಡುವ ಒಟ್ಟು ರೂ. 14.24 ಕೋಟಿ ರೂ. ಅಂದಾಜು ಮೊತ್ತದ ‘ಓದು ಕರ್ನಾಟಕ’ ಚಟುವಟಿಕೆಗೆ ಕ್ಯಾಬಿನೆಟ್ ಅನುಮೋದಿಸಿದೆ ಎಂದರು.