Uncategorized

ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಬೆಳಗಾವಿ ಜಿಲ್ಲಾ ಪ್ರಕೃತಿ ನಿರ್ವಹಣಾ ಮೇಲುಸ್ತುವಾರಿ ಸಭೆಯ ಅಧ್ಯಕ್ಷತೆ ವಹಿಸಿ, ಜಿಲ್ಲೆಯ ಮುಂಗಾರು ಪರಿಸ್ಥಿತಿ, ಕುಡಿಯುವ ನೀರಿನ ಪೂರೈಕೆ, ಕೃಷಿ, ಆರೋಗ್ಯ ಹಾಗೂ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನೆ ನಡೆಸಿದೆ.

ಬೆಳಗಾವಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಬೆಳಗಾವಿ ಜಿಲ್ಲಾ ಪ್ರಕೃತಿ ನಿರ್ವಹಣಾ ಮೇಲುಸ್ತುವಾರಿ ಸಭೆಯ ಅಧ್ಯಕ್ಷತೆ ವಹಿಸಿ, ಜಿಲ್ಲೆಯ ಮುಂಗಾರು ಪರಿಸ್ಥಿತಿ, ಕುಡಿಯುವ ನೀರಿನ ಪೂರೈಕೆ, ಕೃಷಿ, ಆರೋಗ್ಯ ಹಾಗೂ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನೆ ನಡೆಸಿದೆ.

ಮಳೆಯ ಕೊರತೆಯಿಂದ ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯವಿದ್ದಲ್ಲಿ ಟ್ಯಾಂಕರ್ ಹಾಗೂ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಮಳೆಗಾಲದ ಹಿನ್ನೆಲೆಯಲ್ಲಿ ಶಾಲೆಗಳ ಸುರಕ್ಷತೆ, ಜಾನುವಾರುಗಳಿಗೆ ಮೇವು ಮತ್ತು ನೀರಿನ ಲಭ್ಯತೆ, ಸಾಂಕ್ರಾಮಿಕ ರೋಗಗಳ ನಿಯಂತ್ರಣ, ಮುಂಗಾರು ಹಂಗಾಮಿಗೆ ಅಗತ್ಯವಾದ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳ ಸಮರ್ಪಕ ಪೂರೈಕೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ನದಿ ಪಾತ್ರದ ಪ್ರದೇಶಗಳಲ್ಲಿ ಸಂಭವನೀಯ ಪ್ರವಾಹ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲ ಇಲಾಖೆಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಹಾಗೂ ಯಾವುದೇ ಅನಾಹುತ ಸಂಭವಿಸಿದರೆ ತ್ವರಿತವಾಗಿ ಸ್ಪಂದಿಸಿ ಜನರಿಗೆ ಅಗತ್ಯ ನೆರವು ಒದಗಿಸಬೇಕು ಎಂದು ಸೂಚಿಸಿದೆ.

ಜನರ ಸುರಕ್ಷತೆ ಮತ್ತು ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದ್ದು, ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಪರಿಹಾರ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು.

ಈ ಸಂದರ್ಭದಲ್ಲಿ ವಿಧಾನಸಭಾ ಸದಸ್ಯರಾದ ರಾಜು (ಆಸೀಫ್) ಸೇಠ್, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಬುಡಾ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೆ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಭೋರಸೆ ಗುಲಾಬರಾವ್ ಭೂಷಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

Related Articles

Leave a Reply

Your email address will not be published. Required fields are marked *

Back to top button