Uncategorized
ಅಧಿಕಾರಿಗಳ ಈ ಬೇಜವಾಬ್ದಾರಿತನವೇ ಭೀಕರ ಕೊಲೆಗಳಿಗೆ ದಾರಿಎಸ್ಪಿ ಲಕ್ಷ್ಮಣ ನಿಂಬರಗಿ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಿಎಸ್ಐ ಅವರನ್ನು ಅಮಾನತುಗೊಳಿಸಿ ಕ್ರಮ ಕೈಗೊಂಡಿದ್ದಾರೆ
ಅಧಿಕಾರಿಗಳ ಈ ಬೇಜವಾಬ್ದಾರಿತನವೇ ಭೀಕರ ಕೊಲೆಗಳಿಗೆ ದಾರಿ ಮಾಡಿಕೊಟ್ಟಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಎಸ್ಪಿ ಲಕ್ಷ್ಮಣ ನಿಂಬರಗಿ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಿಎಸ್ಐ ಅವರನ್ನು ಅಮಾನತುಗೊಳಿಸಿ ಕ್ರಮ ಕೈಗೊಂಡಿದ್ದಾರೆ

ವಿಜಯಪುರ: ಭೀಮಾತೀರವನ್ನು ನಡುಗಿಸಿದ್ದ ಭೀಕರ 6 ಜನರ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಚಡಚಣ ಪಿಎಸ್ಐ ಸೋಮೇಶ ಗೆಜ್ಜಿ ಅವರನ್ನು ಅಮಾನತುಗೊಳಿಸಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಲಕ್ಷ್ಮಣ ನಿಂಬರಗಿ ಶನಿವಾರ ಆದೇಶ ಹೊರಡಿಸಿದ್ದಾರೆ.
ಮೇ 29 ರಂದು ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಭೀಕರ ಹತ್ಯಾಕಾಂಡ ನಡೆದಿತ್ತು. ಈ ಘಟನೆಗೂ ಮುನ್ನವೇ ಸಂತ್ರಸ್ತ ನಿರಾಳೆ ಹಾಗೂ ಪಾಟೀಲ್ ಕುಟುಂಬಗಳು ರಕ್ಷಣೆ ಕೋರಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದವು ಎಂದು ತಿಳಿದುಬಂದಿದೆ.
ಆದರೆ, ಉಭಯ ಕುಟುಂಬಗಳ ನಡುವಿನ ಜಗಳ ಹಾಗೂ ಗಂಭೀರ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಮತ್ತು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಲ್ಲಿ ಪಿಎಸ್ಐ ಸೋಮೇಶ ಗೆಜ್ಜಿ ಅವರು ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎನ್ನಲಾಗಿದೆ.
ಅಧಿಕಾರಿಗಳ ಈ ಬೇಜವಾಬ್ದಾರಿತನವೇ ಭೀಕರ ಕೊಲೆಗಳಿಗೆ ದಾರಿ ಮಾಡಿಕೊಟ್ಟಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಎಸ್ಪಿ ಲಕ್ಷ್ಮಣ ನಿಂಬರಗಿ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಿಎಸ್ಐ ಅವರನ್ನು ಅಮಾನತುಗೊಳಿಸಿ ಕ್ರಮ ಕೈಗೊಂಡಿದ್ದಾರೆ