Uncategorized

ಸ್ಥವನಿಧಿ ಘಾಟ್‌ನಲ್ಲಿ ಘೋರ ದುರಂತ: ಟ್ರಕ್-ಕಾರು ನಡುವೆ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಗಂಭೀರ!

ಸ್ಥವನಿಧಿ ಘಾಟ್‌ನಲ್ಲಿ ಘೋರ ದುರಂತ: ಟ್ರಕ್-ಕಾರು ನಡುವೆ ಭೀಕರ ಅಪಘಾತ, ಇಬ್ಬರು ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಗಂಭೀರ!
ರಾಷ್ಟ್ರೀಯ ಹೆದ್ದಾರಿ 48ರ ನಿಪ್ಪಾಣಿ ಸಮೀಪದ ಸ್ಥವನಿಧಿ ಘಾಟ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಟ್ರಕ್ ಬ್ರೇಕ್ ವೈಫಲ್ಯಗೊಂಡು ಮುನ್ನಡೆಯುತ್ತಿದ್ದ ಕಾರಿಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ನಿಪ್ಪಾಣಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ–48ರ ಸ್ಥವನಿಧಿ ಘಾಟ್ ಬಳಿ ನಿಯಂತ್ರಣ ತಪ್ಪಿದ ಟ್ರಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ದುರ್ಮರಣಕ್ಕೀಡಾಗಿದ್ದಾರೆ.
ಮೃತರನ್ನು ಮಹಾರಾಷ್ಟ್ರದ ಕೊಲ್ಲಾಪುರ ನಿವಾಸಿ ಸೋಯಲ್ ಮುನೇರ (36) ಮತ್ತು ಇಂಚಲಕರಂಜಿ ಗ್ರಾಮದ ವಿನಯ ಪಾಟೀಲ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ಕೊಡಿಸಲಾಗುತ್ತಿದೆ.
ಚಲಿಸುತ್ತಿದ್ದ ಟ್ರಕ್‌ನ ಬ್ರೇಕ್ ಫೇಲ್ ಆದ ಪರಿಣಾಮ ಅದು ಮುಂದೆ ಹೋಗುತ್ತಿದ್ದ ಕಾರಿಗೆ ಪ್ರಬಲವಾಗಿ ಅಪ್ಪಳಿಸಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button