ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ಘನ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಪ್ರಾದೇಶಿಕ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ಘನ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಪ್ರಾದೇಶಿಕ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಜನಪ್ರತಿನಿಧಿಯಾಗಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಭಾಗವಹಿಸಿದ್ದರು
ಈ ಸಂದರ್ಭದಲ್ಲಿ ನೂತನ ಮುಖ್ಯಮಂತ್ರಿಯಾಗಿ ಪ್ರಥಮ ಬಾರಿಗೆ ಬೆಳಗಾವಿ ಜಿಲ್ಲೆಗೆ ಆಗಮಿಸಿದ ಶ್ರೀ ಡಿ.ಕೆ. ಶಿವಕುಮಾರ್ ಅವರನ್ನು ಅಭಿನಂದಿಸಿ, ಶುಭ ಹಾರೈಸಿದರು
ಸಭೆಯಲ್ಲಿ ಬೆಳಗಾವಿ ಪ್ರಾದೇಶಿಕ ವಿಭಾಗದ ವಿವಿಧ ಅಭಿವೃದ್ಧಿ ಯೋಜನೆಗಳ ಸದ್ಯದ ಸ್ಥಿಗತಿ, ಜನಪರ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಬಾಕಿ ಇರುವ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗೆ ತಲುಪುವಂತೆ ಶ್ರಮಿಸಬೇಕು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಪ್ರಮುಖ ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್, ಸಚಿವರಾದ ಶ್ರೀ ಸತೀಶ ಜಾರಕಿಹೊಳಿ, ಶ್ರೀ ಎಂ. ಪಾಟೀಲ, ಶ್ರೀ ಯು.ಟಿ. ಖಾದರ್, ಶ್ರೀ ಈಶ್ವರ ಖಂಡ್ರೆ, ಸಭಾಧ್ಯಕ್ಷ ಶ್ರೀ ರುದ್ರಪ್ಪಾ ಲಮಾಣಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್, ಶಾಸಕರು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



