Uncategorized

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ ಹೃದಯಾಘಾತದಿಂದ ನಿಧನ

ಮಾಜಿ ಪ್ರಧಾನಿ ಹೆಚ್.​ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಹೃದಯಾಘಾತದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ, ಅವರಿಗೆ 85 ವರ್ಷ ವಯಸ್ಸಾಗಿತ್ತು.ಚೆನ್ನಮ್ಮ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬುಧವಾರ ಸಂಜೆ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ನಿನ್ನೆ ನುರಿತ ತಜ್ಞ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡಿದೆ ಎಂದು ಹೇಳಲಾಗಿತ್ತು.

ಇಂದು ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಚೆನ್ನಮ್ಮ ಅವರಿಗೆ ಹೃದಯಾಘಾತ ಸಂಭವಿಸಿತ್ತು. ಇದೀಗ ಮಣಿಪಾಲ್ ಆಸ್ಪತ್ರೆಯಲ್ಲಿಯೇ ಚೆನ್ನಮ್ಮ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಚೆನ್ನಮ್ಮ ನಿಧನ ಸುದ್ದಿ ಬೆನ್ನಲ್ಲೇ ದೇವೇಗೌಡರ ಕುಟುಂಬ ಸದಸ್ಯರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button