Uncategorized

ನೀಟ್ ಅಕ್ರಮದ ಹೊಣೆ ಹೊತ್ತು ಪ್ರಧಾನಿ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ ಡಿಸಿಎಂ ಜಿ ಪರಮೇಶ್ವರ್ ಅವರು ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಸ್ಥಿತಿಯನ್ನು ರಾಷ್ಟ್ರೀಯ ವಿಕೋಪವೆಂದು ಘೋಷಿಸುವಂತೆ ಕೇಂದ್ರವನ್ನು ಆಗ್ರಹಿಸಿದರು.

ನೀಟ್ ಅಕ್ರಮದ ಹೊಣೆ ಹೊತ್ತು ಪ್ರಧಾನಿ ಮೋದಿ ಹಾಗೂ ಕೇಂದ್ರ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ ಡಿಸಿಎಂ ಜಿ ಪರಮೇಶ್ವರ್ ಅವರು ರಾಜ್ಯದಲ್ಲಿ ತಲೆದೋರಿರುವ ತೀವ್ರ ಬರ ಸ್ಥಿತಿಯನ್ನು ರಾಷ್ಟ್ರೀಯ ವಿಕೋಪವೆಂದು ಘೋಷಿಸುವಂತೆ ಕೇಂದ್ರವನ್ನು ಆಗ್ರಹಿಸಿದರು.

ನೀಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮದ ವಿರುದ್ಧ ಧ್ವನಿ ಎತ್ತಿರುವ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ವಾಡ್ರಾ ಅವರ ಬಂಧನವನ್ನು ಖಂಡಿಸಿದ ಡಿಸಿಎಂ , ಲಕ್ಷಾಂತರ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ನಡೆಸಿದ ಪ್ರತಿಭಟನೆ ಸಂಪೂರ್ಣ ಕಾನೂನುಬದ್ಧವಾಗಿತ್ತು ಎಂದರು. ಪ್ರತಿಭಟನಾಕಾರರ ಧ್ವನಿಯನ್ನು ಅಡಗಿಸಲು ಕೇಂದ್ರ ಸರ್ಕಾರ ಯತ್ನಿಸುತ್ತಿದ್ದು, ಈ ಹೋರಾಟ ಮುಂದುವರಿಯಲಿದೆ. ಹಿಂದೆ ರೈಲ್ವೆ ಅಪಘಾತಗಳಾದಾಗ ಸಚಿವರು ರಾಜೀನಾಮೆ ನೀಡಿದ ಉದಾಹರಣೆಗಳಿದ್ದು, ಈ ಅಕ್ರಮದ ಹೊಣೆ ಹೊತ್ತು ಪ್ರಧಾನಿ ನರೇಂದ್ರ ಮೋದಿ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆರುವುದು ಸ್ವಾಭಾವಿಕ ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಸಂಪುಟ ವಿಸ್ತರಣೆ ಕುರಿತು ಮಾತನಾಡಿ, ಸಿಎಂ, ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರು ದೆಹಲಿಯಲ್ಲಿ ವರಿಷ್ಠರ ಭೇಟಿಗೆ ತೆರಳಿದ್ದು, ಅನುಮತಿ ಸಿಕ್ಕ ನಂತರ ತೀರ್ಮಾನವಾಗಲಿದೆ; ತುಮಕೂರು ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ನೀಡಬೇಕೆಂಬುದು ತಮ್ಮ ಆಗ್ರಹ ಎಂದರು.

ರಾಜ್ಯದಲ್ಲಿ ಬರದ ಛಾಯೆ ತೀವ್ರವಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ ಸಚಿವರು, ಬರ ಪರಿಹಾರ ಸಂಬಂಧ ಈಗಾಗಲೇ ತಾವು ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದರು. ಮುಂಬರುವ ಶನಿವಾರ

ಚಿತ್ರದುರ್ಗದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರೊಂದಿಗೆ ಬೆಂಗಳೂರು ವಿಭಾಗದ ಪರಿಶೀಲನಾ ಸಭೆ ಹಾಗೂ ನಂತರ ಮೈಸೂರು ವಿಭಾಗದ ಸಭೆ ನಡೆಸಲಾಗುವುದು. ರಾಜ್ಯದ ಬರದ ಸ್ಥಿತಿಯನ್ನು ‘ರಾಷ್ಟ್ರೀಯ ವಿಕೋಪ’ ಎಂದು ಘೋಷಿಸುವಂತೆ ಕೋರಿ ಪ್ರಧಾನಿಯವರಿಗೆ ಈಗಾಗಲೇ ಪತ್ರ ಬರೆಯಲಾಗಿದ್ದು, ಕೇಂದ್ರದಿಂದ ಇನ್ನೂ ಯಾವುದೇ ಉತ್ತರ ಬಂದಿಲ್ಲ ಎಂದರು. ಇನ್ನು ತುಮಕೂರು ಏರ್‌ಪೋರ್ಟ್ ವಿಚಾರವಾಗಿ ಪ್ರತಿಕ್ರಿಯಿಸಿ, ತುಮಕೂರು 20 ಜಿಲ್ಲೆಗಳ ಹೆಬ್ಬಾಗಿಲಾಗಿದ್ದು, ಇಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾದರೆ ಇಡೀ ಪ್ರದೇಶಕ್ಕೆ ಅನುಕೂಲವಾಗಲಿದೆ ಎಂದು ಸಮರ್ಥಿಸಿಕೊಂಡರು.

Related Articles

Leave a Reply

Your email address will not be published. Required fields are marked *

Back to top button