Uncategorized

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿ ಆತಂಕ ಸೃಷ್ಟಿಸಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿ ಆತಂಕ ಸೃಷ್ಟಿಸಿದೆ.
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ಆದರ್ಶ ಬಾರ್ ಸಮೀಪ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
ಘಟನೆಯ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ರಾಯಬಾಗ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮೃತನ ಹೆಸರು ಹಾಗೂ ಊರಿನ ವಿವರಗಳನ್ನು ತಿಳಿಯಲು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದರೂ ಯಾವುದೇ ಸುಳಿವು ಲಭ್ಯವಾಗಿಲ್ಲ.
ಬಳಿಕ ಪೊಲೀಸರು ಮೃತದೇಹವನ್ನು ಆಂಬುಲೆನ್ಸ್ ಮೂಲಕ ರಾಯಬಾಗ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಪ್ರಸ್ತುತ ಮೃತ ವ್ಯಕ್ತಿಯ ಕುರಿತು ಯಾವುದೇ ಮಾಹಿತಿ ಇದ್ದಲ್ಲಿ ತಕ್ಷಣವೇ ತಮ್ಮನ್ನು ಸಂಪರ್ಕಿಸುವಂತೆ ರಾಯಬಾಗ ಪೊಲೀಸ್ ಠಾಣೆಯ ಅಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button