Uncategorized
ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವ ಮೆರವಣಿಗೆ ವೇಳೆ ಯುವಕನೋರ್ವನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ನ.1ರ ಶುಕ್ರವಾರ ರಾತ್ರಿ ಸಂಭವಿಸಿದೆ.
ಬೆಳಗಾವಿಯ ಖಾನಾಪುರ ರಸ್ತೆಯ ಕಮಲ ನಗರದ ಮಲ್ಲೇಶ್ ಪೂಜಾರಿ ಎಂಬ ವ್ಯಕ್ತಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ಆಗಿದ್ದು, ಕೂಡಲೇ ಈತನನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯೋತ್ಸವ ಮೆರವಣಿಗೆಯ ರೂಪಕ ವಾಹನದಲ್ಲಿ ಕುಳಿತಿದ್ದ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.