Uncategorized
ವಕ್ಫ್: ವಿಚಾರಣೆ, ದಾಖಲೆ ಪರಿಶೀಲನೆ
ಧಾರವಾಡ: ತಾಲ್ಲೂಕಿನ ಉಪ್ಪಿನಬೆಟಗೇರಿಯ ಕೆಲ ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಹೆಸರು ನಮೂದಾದ ಬಗ್ಗೆತಹಶೀಲ್ದಾರ್ ಕಚೇರಿಯಲ್ಲಿ ಮಂಗಳವಾರ ವಿಚಾರಣೆ ಮತ್ತು ದಾಖಲೆ ಪರಿಶೀಲನೆ ನಡೆಯಿತು. ತಹಶೀಲ್ದಾರ್ ಡಾ.ದೊಡ್ಡಪ್ಪ ಹೂಗಾರ ಅವರು ಪ್ರಕ್ರಿಯೆ ನಡೆಸಿದರು. ಜಿಲ್ಲಾ ವಕ್ಫ್ ಅಧಿಕಾರಿ ಮತ್ತು ರೈತರು ಹಾಜರಿದ್ದರು.
‘ಉಪ್ಪಿನಬೆಟಗೇರಿಯ ಆರು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರಕ್ರಿಯೆ ನಡೆಯಿತು. ಕೆಲ ಸರ್ವೆ ನಂಬರ್, ಬ್ಲಾಕ್ ನಂಬರ್‌ಗಳಲ್ಲಿ ವ್ಯತ್ಯಾಸ ಆಗಿದೆ. ದಾಖಲೆಗಳನ್ನು ಪರಿಶೀಲಿಸಿ, ವಾರದಲ್ಲಿ ಸಮಸ್ಯೆ ಪರಿಹರಿಸಲಾಗುವುದು’ ಎಂದು ತಹಶೀಲ್ದಾರ್ ದೊಡ್ಡಪ್ಪ ಹೂಗಾರ ‘ಪ್ರಜಾವಾಣಿ’ಗೆ ತಿಳಿಸಿದರು.
‘ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಸರ್ವೆ ನಂಬರ್ ವ್ಯತ್ಯಾಸ ಆಗಿದೆ. ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವುದಾಗಿ ತಿಳಿಸಿದ್ಧಾರೆ’ ಎಂದು ಉಪ್ಪಿನಬೆಟಗೇರಿ ಗ್ರಾಮಸ್ಥ ಗಂಗಪ್ಪ ಆರ್. ಜಾವಳಗಿ ತಿಳಿಸಿದರು.