Uncategorized
ಸಿಸಿಬಿ ಕಚೇರಿಗೆ ಮಹಿಳಾ ಆಯೋಗದ ಅಧ್ಯಕ್ಷೆ ದಿಢೀರ್ ಭೇಟಿ
ಸಿಸಿಬಿ ಕಚೇರಿಗೆ ಮಹಿಳಾ ಆಯೋಗದ ಅಧ್ಯಕ್ಷೆ ದಿಢೀರ್ ಭೇಟಿ

ಬೆಂಗಳೂರು: ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಕಚೇರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಗುರುವಾರ ದಿಢೀರ್ ಭೇಟಿ ನೀಡಿ ಹಲವು ಪ್ರಕರಣಗಳ ಸಂಬಂಧ ಮಾಹಿತಿ ಪಡೆದರು.
ಸಿಸಿಬಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದು, ಅಧ್ಯಕ್ಷರಿಗೆ ಮಾಹಿತಿ ನೀಡಿದರು.
ಸಿಸಿಬಿಯಲ್ಲಿ ಮಹಿಳಾ ಸಂರಕ್ಷಣಾ ವಿಭಾಗವು ಕಾರ್ಯನಿರ್ವಹಿಸುತ್ತಿದ್ದು, ಅದರ ಕಾರ್ಯವೈಖರಿ ಹಾಗೂ ಮಹಿಳಾ ಸಿಬ್ಬಂದಿಯ ಸುರಕ್ಷತೆಗೆ ತೆಗೆದುಕೊಂಡ ಕ್ರಮಗಳ ಕುರಿತೂ ಮಾಹಿತಿ ಪಡೆದರು.
ಅಕ್ರಮ ಚಟುವಟಿಕೆಗಳಿಗೆ ಮಹಿಳೆಯರನ್ನು ಬಳಸಿಕೊಂಡವರ ವಿರುದ್ಧ ದಾಖಲಾದ ಪ್ರಕರಣಗಳ ಸಂಖ್ಯೆ, ದಾಳಿಯ ವೇಳೆ ರಕ್ಷಿಸಿದ ಮಹಿಳೆಯರ ಸುರಕ್ಷತೆಗೆ ತೆಗೆದುಕೊಂಡ ಕ್ರಮಗಳ ಬಗ್ಗೆಯೂ ನಾಗಲಕ್ಷ್ಮಿ ಮಾಹಿತಿ ಪಡೆದುಕೊಂಡರು ಎಂದು ಗೊತ್ತಾಗಿದೆ.