
ಚಿಕ್ಕೋಡಿ: ವಸತಿ ಶಾಲೆಯ ವಿದ್ಯಾರ್ಥಿನಿ ಕಾಲು ಜಾರಿ ಬಿದ್ದು ಮೃತಪಟ್ಟ ದಾರುಣ ಘಟನೆ ಚಿಕ್ಕೋಡಿ ತಾಲೂಕಿನ ಹಿರೇಕೊಡಿ ಗ್ರಾಮದಲ್ಲಿ ನಡೆದಿದೆ.
ಮೂಲತಃ ಗೋಕಾಕ ತಾಲೂಕಿನ ಶಿಂದಿಕುರಬೇಟ ಮೂಲದ 17 ವರ್ಷ ಆಫ್ರಿನ್ ಜಾಮದಾರ್ ಮೃತ ವಿದ್ಯಾರ್ಥಿನಿ. ಇಂದು ಪರೀಕ್ಷೆ ಇದ್ದ ಕಾರಣಕ್ಕೆ ವಿದ್ಯಾರ್ಥಿನಿ ಮಧ್ಯರಾತ್ರಿವರೆಗೂ ವಸತಿ ನಿಲಯದ ಕಟ್ಟಡಲ್ಲಿ ಓದುತ್ತಿದ್ದಳು.
ಈ ವೇಳೆ ಮೊದಲ ಮಹಡಿಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.